ADVERTISEMENT
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದ ಡ್ರಾದಲ್ಲಿ ಅಂತ್ಯಗೊಂಡಿದೆ. ಈ ಮೂಲಕ ಆಸ್ಟ್ರೇಲಿಯಾ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. 4ನೇ ಮತ್ತು ಕಡೆಯ ಟೆಸ್ಟ್ ಪಂದ್ಯ ಡಿಸೆಂಬರ್ 26ರಿಂದ ಮೆಲ್ಬೂರ್ನ್ನಲ್ಲಿ ನಡೆಯಲಿದೆ.
ಬ್ರಿಸ್ಬೇನ್ನಲ್ಲಿ ನಡೆದ ಮೂರನೇ ಟೆಸ್ಟ್ನ ಎರಡನೇ ಇನ್ನಿಂಗ್ಸ್ನಲ್ಲಿ ಭಾರತ 2.1 ಓವರ್ಗಳನ್ನಷ್ಟೇ ಆಡಲು ಸಾಧ್ಯವಾಯಿತು. ಎರಡನೇ ಇನ್ನಿಂಗ್ಸ್ಲ್ಲಿ ಭಾರತ ವಿಕೆಟ್ ನಷ್ಟವಿಲ್ಲದೇ 8 ರನ್ ಗಳಿಸಿತ್ತು. ಯಶಸ್ವಿ ಜೈಸ್ವಾಲ್ ಮತ್ತು ಕೆ ಎಲ್ ರಾಹುಲ್ ತಲಾ 4 ರನ್ ಗಳಿಸಿದ್ದರು.
ಎರಡನೇ ಇನ್ನಿಂಗ್ಸ್ನಲ್ಲಿ 89 ರನ್ಗೆ 7 ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾ ಡಿಕ್ಲೇರ್ ಮಾಡಿಕೊಂಡಿತ್ತು. ಭಾರತಕ್ಕೆ ಮೂರನೇ ಟೆಸ್ಟ್ನಲ್ಲಿ ಗೆಲುವಿಗೆ 275 ರನ್ಗಳ ಗುರಿ ನೀಡಿತ್ತು
ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ನಲ್ಲಿ ಕೇವಲ 18 ಓವರ್ಗಳನ್ನು ಮಾತ್ರ ಆಡಿದೆ. ಮೊದಲ ಇನ್ನಿಂಗ್ಸ್ನಲ್ಲಿ 185 ರನ್ಗಳ ಮುನ್ನಡೆಯನ್ನು ಸಾಧಿಸಿತ್ತು.
ಅಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್ನಲ್ಲಿ ಬೂಮ್ರಾ 3 ವಿಕೆಟ್, ಸಿರಾಜ್ ಮತ್ತು ಆಕಾಶ್ ದೀಪ್ ತಲಾ 2 ವಿಕೆಟ್ ಪಡೆದರು.
ಭಾರತ ಮೊದಲ ಇನ್ನಿಂಗ್ಸ್ನಲ್ಲಿ 260 ರನ್ಗೆ ಆಲೌಟ್ ಆಗಿತ್ತು. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 445 ರನ್ ಗಳಿಸಿತ್ತು.
ADVERTISEMENT