ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಓರ್ವ ಯುವಕ 9 ವರ್ಷದ ಬಾಲಕಿ ಹಾಗೂ 6 ವರ್ಷದ ಮಗುವನ್ನು ಅಪಹರಣ ಮಾಡಿದ್ದ, ಆತನೇ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 9 ವರ್ಷದ ಬಾಲಕಿ ಮೃತಪಟ್ಟಿದ್ದು, ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ. 6 ವರ್ಷದ ಬಾಲಕಿ ಆರೋಪಿಯ ಕೈಯಿಂದ ತಪ್ಪಿಸಿಕೊಂಡಿದ್ದಾಳೆ. ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ : ಅತ್ಯಾಚಾರ ಪ್ರಕರಣ : ನಿತ್ಯಾನಂದ ಸ್ವಾಮೀಜಿ ಮೇಲೆ ಅರೆಸ್ಟ್ ವಾರೆಂಟ್ ಜಾರಿ
ಎಸ್ಎಸ್ ಪಿ ಮುನಿರಾಜ್ ಜಿ ಈ ಬಗ್ಗೆ ಮಾಹಿತಿ ನೀಡಿದ್ದು, ಬಾಲಕಿಯ ಗ್ರಾಮದಲ್ಲೇ ವಾಸವಿದ್ದ ಯುವಕ ಬಾಲಕಿಯರನ್ನು ದ್ವಿಚಕ್ರವಾಹನದಲ್ಲಿ ಸುತ್ತಾಡಿಸಲು ಕರೆದೊಯ್ದಿದ್ದ, ಎಷ್ಟೇ ಹೊತ್ತಾದರೂ ಬಾಲಕಿಯರು ಮನೆಗೆ ಬಾರದೇ ಇದ್ದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ದೂರು ಸ್ವೀಕರಿಸಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿದೆ. ಆರೋಪಿ ತನ್ನ ತಪ್ಪನ್ನು ಪೊಲೀಸ್ ಅಧಿಕಾರಿಗಳ ಎದುರು ಒಪ್ಪಿಕೊಂಡಿದ್ದಾನೆ. ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.