ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ವಿದ್ಯಾ ಸಂಸ್ಥೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬಾಂಬ್ ಬೆದರಿಕೆ ಬಂದಿದೆ. ಸದ್ಯ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ.
ಸ್ಕೂಲ್ ಒಳಗೆ ಬಾಂಬ್ ಇಟ್ಟಿದ್ದೀವಿ. ಬೆಳಗ್ಗೆ 10:20ಕ್ಕೆ ಬ್ಲಾಸ್ಟ್ ಆಗುತ್ತೆ ಎಂದು ಆಗಂತಕರು ಮೇಲ್ ಮಾಡಿ ಬೆದರಿಸಿದ್ದಾರೆ. ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಅಲರ್ಟ್ ಆಗಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಶಾಲೆಗೆ ಬಂದ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.