ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಶಾಸಕ ಎ ಎಸ್ ಪೊನ್ನಣ್ಣ ಅವರು ನೇಮಕಗೊಂಡಿದ್ದಾರೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಆದೇಶ ಹೊರಡಿಸುವಂತೆ ಸಿಎಂ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸೂಚಿಸಿದ್ದಾರೆ.
ಕಾನೂನು ಸಲಹೆಗಾರರಾಗಿರುವ ಎ ಎಸ್ ಪೊನ್ನಣ್ಣ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ಸಿಗಲಿದೆ.
ಪೊನ್ನಣ್ಣ ಅವರು ವಿರಾಜಪೇಟೆ ಕ್ಷೇತ್ರದ ಶಾಸಕರಾಗಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅಡ್ವೋಕೆಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.
ADVERTISEMENT
ADVERTISEMENT