ಬೆಳಗಾವಿಯ ಮಸೀದಿಯ ಮೇಲೆ ಕೇಸರಿ ಧ್ವಜವನ್ನು ಹಾರಾಟ ನಡೆಸಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಬೆಳಗಾವಿಯ ಮಸೀದಿಯೊಂದರ ಮೇಲೆ ಕಿಡಿಗೇಡಿಗಳು ಕೇಸರಿ ಧ್ವಜ ಕಟ್ಟಿದ್ದಾರೆ. ಈ ಸಂಬಂಧ ಪೊಲೀಸರು ಅಪರಿಚಿತ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು ವಿಚಾರಣೆ ಆರಂಭಿಸಿದ್ದಾರೆ.
ಶ್ರೀರಾಮ ಜಯಂತಿ ಹಾಗೂ ಹನುಮ ಜಯಂತಿಯ ವೇಳೆ ದೇಶದ ಬೇರೆ ಬೇರೆ ಕಡೆ ಕಲ್ಲು ತೂರಾಟ ನಡೆದ ನಂತರ, ಮಸೀದಿಯ ಮೇಲೆ ಕೇಸರಿ ಧ್ವಜ ಕಟ್ಟುವ ಘಟನೆಗಳು ವರದಿಯಾಗುತ್ತಲೇ ಇವೆ.
ಇತ್ತೀಚಿಗೆ ಕರ್ನಾಟಕದಲ್ಲಿಯೂ ಕೋಮು ಪ್ರಚೋದನೆಯ ಪ್ರಕರಣಗಳು ಹೆಚ್ಚುತ್ತಿವೆ.