ADVERTISEMENT
ಮಹತ್ವದ ತೀರ್ಪಿನಲ್ಲಿ ಕರ್ನಾಟಕ ಹೈಕೋರ್ಟ್ (Karnataka HighCourt) ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಯನ್ನೇ (ACB) ರದ್ದುಗೊಳಿಸಿದೆ.
ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ರಚಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾರವರಿದ್ದ ಪೀಠ ತೀರ್ಪು ನೀಡಿದೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು. ಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು. ಜಾತಿ ಆಧರಿಸಿ ಲೋಕಾಯುಕ್ತ, ಉಪಲೋಕಾಯುಕ್ತ ನೇಮಕವಾಗಬಾರದು. ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು
ಎಸಿಬಿ ಬಳಿ ಇರುವ ಎಲ್ಲಾ ಪ್ರಕರಣಗಳು ಲೋಕಾಯುಕ್ತಕ್ಕೆ ವರ್ಗಾವಣೆ ಆಗಲಿದೆ.
ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ಮರುಸ್ಥಾಪಿಸಿ ಎಲ್ಲಾ ಪ್ರಕರಣಗಳನ್ನೂ ಲೋಕಾಯುಕ್ತ ಪೊಲೀಸರಿಗೆ ವರ್ಗಾವಣೆ ಮಾಡಿದೆ.
ಎಸಿಬಿ ರಚನೆ ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘ, ಚಿದಾನಂದ ಅರಸ್, ಸಮಾಜ ಪರಿವರ್ತನಾ ಸಮುದಾಯ, ಮತ್ತಿತರರು PIL ಸಲ್ಲಿಸಿದ್ದರು
ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ.
ಎಸಿಬಿಯನ್ನು ರದ್ದುಗೊಳಿಸುವ ಬಗ್ಗೆ 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ ಹೇಳಿತ್ತಾದರೂ ಆ ನಿರ್ಧಾರವನ್ನು ಕೈಗೊಂಡಿರಲಿಲ್ಲ.
ವಿಧಾನಸಭಾ ಚುನಾವಣೆ ಹತ್ತಿರ ಆಗುತ್ತಿರುವ ಹೊತ್ತಲ್ಲೇ ಎಸಿಬಿಯನ್ನು ರದ್ದುಗೊಳಿಸಿ ಹೈಕೋರ್ಟ್ ನೀಡಿರುವ ತೀರ್ಪು ಕಾಂಗ್ರೆಸ್-ಬಿಜೆಪಿ ಮತ್ತು ಜೆಡಿಎಸ್ ನಡುವೆ ಅತೀ ದೊಡ್ಡ ಚುನಾವಣಾ ವಿಷಯ ಆಗಲಿರುವುದಂತೂ ಸತ್ಯ.
ಈ ಮೂಲಕ ಕರ್ನಾಟಕದಲ್ಲಿ ಲೋಕಾಯುಕ್ತ ಮಾತ್ರ ಭ್ರಷ್ಟಾಚಾರ ವಿರುದ್ಧದ ತನಿಖಾ ಸಂಸ್ಥೆಯಾಗಿ ಉಳಿಯಲಿದೆ.
ಎಸಿಬಿ ಬಗ್ಗೆ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಅವರಿದ್ದ ಪೀಠ ಈ ಹಿಂದೆ ಬೆಂಗಳೂರು ಡಿಸಿ ಕಚೇರಿಯಲ್ಲಿ ನಡೆದಿದ್ದ ಲಂಚ ಪ್ರಕರಣದ ತನಿಖೆ ವೇಳೆ ಕಟು ಟಿಪ್ಪಣಿಗಳನ್ನು ಮಾಡಿತ್ತು.
ADVERTISEMENT