ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 9 ತಿಂಗಳು ಬಾಕಿ ಇರುವಂತೆ ಮಹತ್ವದ ಬೆಳವಣಿಗೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ಶಾಸಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮೇಲೆ ಅಕ್ರಮ ಆಸ್ತಿ ಗಳಿಕೆ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿದೆ.
ಜಾರಿ ನಿರ್ದೇಶನಾಲಯದ ವರದಿ ಆಧರಿಸಿ ಎಸಿಬಿ ಎಫ್ಐಆರ್ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ಗೆ ಸೇರಿದ ಮನೆ, ಕಚೇರಿ ಸೇರಿದಂತೆ ಐದು ಕಡೆ ದಾಳಿ ನಡೆಸಿರುವ ಎಸಿಬಿ ಶೋಧ ಕೈಗೊಂಡಿದೆ.
ಈ ಹಿಂದೆ ಜಮೀರ್ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.
ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ಬಳಿ ಇರುವ ಜಮೀರ್ ನಿವಾಸ, ಓಕ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲಾö್ಯಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿಯಲ್ಲಿ ಎಸಿಬಿ ಶೋಧ ಕೈಗೊಂಡಿದೆ.