ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿರುವ ಘಟನೆ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಶಿವಪ್ಪ ಮಲ್ಲೂರ (46) ಮತ್ತು ಬಾಲಕ ಸಂದೀಪ ಮಲ್ಲೂರ (11) ಮೃತ ದುರ್ದೈವಿಗಳು. ಮತ್ತೊಬ್ಬ ಬೈಕ್ ಸವಾರ ಚೆನ್ನಬಸ್ಪ್ಪ ಬಗನಾಳ (32) ಎನ್ನುವವರಿಗೆ ಗಂಭೀರ ಗಾಯಗಳಾಗಿವೆ.
ಬೈಲಹೊಂಗಲದಿಂದ ಕಾರವಾರಕ್ಕೆ ಹೊರಟಿದ್ದ ಕಾರು ಮತ್ತು ಬೆಳವಡಿ ಕಡೆಯಿಂದ ಬೈಲಹೊಂಗಲದ ಕಡೆ ಹೊರಟಿದ್ದ ಬೈಕ್ ನಡುವೆ ಅಪಘಾತ ನಡೆದಿದೆ.
ಈ ದುರ್ಘಟನೆಯಲ್ಲಿ ಬಾಲಕ ಸಂದೀಪ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಶಿವಪ್ಪ ಅವರು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ.
ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಅಖಲಾಗಿದೆ.