ಧಾರವಾಡದಲ್ಲಿ 9 ಜನರ ಸಾವಿಗೆ ಕಾರಣವಾದ ಧಾರವಾಡ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಸಂತ್ರಸ್ಥ ಕುಟುಂಬಗಳಿಗೆ ತಲಾ 5 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ @JoshiPralhad ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
— Basavaraj S Bommai (Modi Ka Parivar) (@BSBommai) May 22, 2022
ಮದುವೆಗೆ ಹುಡುಗಿ ನೋಡಿಕೊಂಡು ಬರಲು ಹೋಗಿದ್ದ ಕುಟುಂಬ ಧಾರವಾಡದ ಬಾಡ ಗ್ರಾಮದ ಬಳಿ ಅವರಿದ್ದ ಕ್ರಷರ್ ಮರಕ್ಕೆ ಡಿಕ್ಕಿಹೊಡೆದು 9 ಜನರೂ ಸಾವನ್ನಪ್ಪಿದ್ದರು.