ADVERTISEMENT
ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಟ ದರ್ಶನ್ ಅವರ ಮನೆಯ ನಾಯಿಗಳು ದಾಳಿ ಮಾಡಿದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣದಲ್ಲಿ ದರ್ಶನ್ ಅವರು ಎರಡನೇ ಆರೋಪಿಯಾಗಿದ್ದಾರೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 289ರಡಿ (ಪ್ರಾಣಿಗಳ ವಿಷಯದಲ್ಲಿ ನಿರ್ಲಕ್ಷ್ಯತೆ ವಹಿಸಿದ ಆರೋಪ) ಎಫ್ಐಆರ್ ದಾಖಲಾಗಿದೆ.
ಈ ಪ್ರಕರಣ ಸಾಬೀತಾದರೆ ಗರಿಷ್ಠ 6 ತಿಂಗಳು ಜೈಲು ಮತ್ತು 1 ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.
ರಾಜರಾಜೇಶ್ವರಿ ನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಬಂದಿದ್ದ ವಕೀಲೆ ಅಮಿತಾ ಎಂಬವರು ದರ್ಶನ್ ಮನೆಯ ಎದುರಿನ ಪಕ್ಕದಲ್ಲಿ ಕಾರು ನಿಲ್ಲಿಸಿದ್ದರು.
ಈ ವೇಳೆ ದರ್ಶನ್ ಅವರ ಮನೆಯ ಮೂರು ನಾಯಿಗಳು ದಾಳಿ ಮಾಡಿದ್ದವು. ಅಮಿತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು.
ADVERTISEMENT