ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಈ ವೇಳೆ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದಲ್ಲಿ ಪ್ರಥಾಮಿಕ ಚಿಕಿತ್ಸೆ ಪಡೆದಿರುವ ಇವರನ್ನು, ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಗಿದೆ.
ನಟ ದಿಗಂತ್ ಪತ್ನಿ ಐಂದ್ರಿತಾ ರೈ ಜೊತೆ ಗೋವಾ ಪ್ರವಾಸಕ್ಕೆ ತೆರಳಿದ್ದರು. ಗೋವಾದಲ್ಲಿ ಈ ಅವಘಡ ಸಂಭವಿಸಿದೆ. ಸಮ್ಮರ್ ಶಾಟ್ ಮಾಡುವ ವೇಳೆ ದಿಗಂತ್ ಅವರ ಕತ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.