ರಾಜ್ಯಸಭೆಗೆ ಆಯ್ಕೆಯಾಗಿರುವ ನಟ ಜಗ್ಗೇಶ್ ಇಂದು ರಾಜ್ಯಸಭೆಯಲ್ಲಿ ಮಂತ್ರಾಲಯದ ‘ರಾಘವೇಂದ್ರ ಸ್ವಾಮಿ’ಗಳ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಲ್ಲದೇ, ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ರಾಜ್ಯದ ಗಮನಸೆಳೆದರು.
ದೆಹಲಿಯಲ್ಲಿ ಇಂದು ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ಸಿಂಗ್, ಜಗ್ಗೇಶ್ ಹಾಗೂ ಜೈರಾಮ್ ರಮೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರಮಾಣ ವಚನ ಬೋಧಿಸಿದರು.
ಇಂದಿನಿಂದ ನಟ, ರಾಜಕಾರಣಿ ಜಗ್ಗೇಶ್ ಅವರು ಅಧಿಕೃತವಾಗಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಲಿದ್ದಾರೆ.
ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ
ಪ್ರಮಾಣವಚನ ಸಿರಿಗನ್ನಡದಲ್ಲಿ
ರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠಕ್ಷಣ…
ಹೃದಯಪೂರ್ವಕ ಧನ್ಯವಾದ @narendramodi@BJP4Karnataka @BSBommai @blsanthosh @nalinkateel
@arunbpbjp ರವರಿಗೆ🙏 pic.twitter.com/CCppTvZrmD— ನವರಸನಾಯಕ ಜಗ್ಗೇಶ್(modi ka parivar) (@Jaggesh2) July 8, 2022