ನಟ ಕಿಚ್ಚ ಸುದೀಪ್ 13 ವರ್ಷಗಳ ನಂತರ ದೆಹಲಿಗೆ ತೆರಳಿದ್ದಾರೆ. ಇಂದು ಶನಿವಾರ ದೆಹಲಿಯಲ್ಲಿ ಕೇಂದ್ರ ಸಚಿವ ಸಚಿವ ಪ್ರಹ್ಲಾದ್ ಜೋಷಿಯವರನ್ನ ಭೇಟಿಯಾದ ಸುದೀಪ್, ಅಲ್ಲಿಯೇ ಬೆಳಗಿನ ಉಪಹಾರ ಸವಿದಿದ್ದಾರೆ.
ನಟ ಕಿಚ್ಚ ಸುದೀಪ್ ತಮ್ಮ ಪ್ಯಾನ್ ಇಂಡಿಯಾ ಚಿತ್ರ ವಿಕ್ರಾಂತ್ ರೋಣದ ಭರ್ಜರಿ ಪ್ರಚಾರದಲ್ಲಿದ್ದಾರೆ. ಸಿನೆಮಾ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ್ದರು.
ದೆಹಲಿ ಭೇಟಿ ವೇಳೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂಡಿಯಾ ಗೇಟ್ಗೆ ಭೇಟಿ ನೀಡಿದ್ದಾರೆ.
ಕಿಚ್ಚ ಸುದೀಪ್ 13 ವರ್ಷಗಳ ಹಿಂದೆ ಈಗ ಚಿತ್ರ ಸಿನೆಮಾ ಮಾಡುವಾಗ ದೆಹಲಿಗೆ ತೆರಳಿದ್ದರು. ಅನಂತರ ಇದೇ ಮೊದಲ ಭಾರಿಗೆ ದೆಹಲಿ ಪ್ರಯಾಣ ಮಾಡಿದ್ದಾರೆ. ಸುದೀಪ್ ಇಂದಿನಿಂದ ವಿಕ್ರಾಂತ್ ರೋಣ ಸಿನೆಮಾ ಪ್ರಚಾರವನ್ನು ಉತ್ತರ ಭಾರತದಾದ್ಯಂತ ಮಾಡಲಿದ್ದಾರೆ.
ಜುಲೈ 28 ಕ್ಕೆ ವಿಶ್ವದಾದ್ಯಂತ ವಿಕ್ರಾಂತ್ ರೋಣ ಸಿನಿಮಾ ತೆರೆ ಕಾಣುತ್ತಿದೆ. ಜಾಕ್ ಮಂಜು ನಿರ್ಮಾಣ ಹಾಗೂ ಅನೂಪ್ ಭಂಡಾರಿ ಈ ಸಿನೆಮಾದ ನಿರ್ದೇಶನದ ಮಾಡಿದ್ದಾರೆ.
ಕೆಜಿಎಪ್ ಬಳಿಕ ಕನ್ನಡ ಚಿತ್ರರಂಗದಿಂದ ಬರುತ್ತಿರೋ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ. ಈ ಸಿನೆಮಾಗಾಗಿ ಕಿಚ್ಚನ ಅಭಿಮಾನಿಗಳು ಹಾಗೂ ಕನ್ನಡ ಸಿನೆಮಾ ಪ್ರೇಕ್ಷಕರು ಬಹು ಕಾತರದಿಂದ ಕಾಯುತ್ತಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು, ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. 13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು ಎಂದು ಹೇಳಿದ್ದಾರೆ.
ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ಚಿತ್ರನಟ @KicchaSudeep ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.
13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು. pic.twitter.com/ncRvbVkKfX— Pralhad Joshi (Modi Ka Parivar) (@JoshiPralhad) July 16, 2022