ADVERTISEMENT
ಸಲಿಂಗ ಮತ್ತು ಅಸಹಜ ಲೈಂಗಿಕ ಕಿರುಕುಳ ಆರೋಪಕ್ಕೊಳಗಾಗಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ನಟಿ ರಮ್ಯಾ ಅವರು ಕಿಡಿಕಾರಿದ್ದಾರೆ.
ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಪ್ರಭಾವಶಾಲಿಗಳು ಮತ್ತು ಅವರ ಹಿಂಸಾತ್ಮಕ ಕೃತ್ಯಗಳಿಗೆ ಗುರಿಯಾದವರು ಬಡವರು, ಮಹಿಳೆಯರು ಮತ್ತು ಮಕ್ಕಳು. ಕರ್ನಾಟಕದ ಸಾಮಾನ್ಯ ಜನರು. ಅಪರಾಧಗಳನ್ನು ಬಯಲಿಗೆಳೆಯುತ್ತಿರುವ ಮಾಧ್ಯಮಗಳು ಮತ್ತು ಕರ್ನಾಟಕ ಪೊಲೀಸರಿಗೆ ಹ್ಯಾಟ್ಸ್ ಆಫ್. ವಿಚಾರಣೆ ತೀವ್ರಗತಿಯಲ್ಲಿ ನಡೆದ ಮತ್ತು ಪ್ರಕರಣಗಳು ತಾರ್ಕಿಕ ಅಂತ್ಯ ಕಂಡಾಗ ನ್ಯಾಯ ಉಳಿಯುತ್ತದೆ. ಒಂದು ವೇಳೆ ನ್ಯಾಯ ಉಳಿಯದೇ ಹೋದರೆ ನಾವು ಸಾರ್ವಜನಿಕರಿಗೆ ಏನು ಸಂದೇಶ ಕೊಡುತ್ತಿದ್ದೇವೆ
ಎಂದು ನಟಿ ರಮ್ಯಾ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ #PrajwalRevanna #Darshan #Yedyurappa #SurajRevanna ಹ್ಯಾಶ್ಟ್ಯಾಗ್ನ್ನೂ ಬಳಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ 2ನೇ ಆರೋಪಿಯಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ಮೂರು ಅತ್ಯಾಚಾರ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈಗ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಮತ್ತು ಅಸಹಜ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.
ADVERTISEMENT