ದಿವಂಗತ ನಟ ಸಂಚಾರಿ ವಿಜಯ್ ಅವರ ಮೊದಲ ವರ್ಷದ ಪುಣ್ಯತಿಥಿಯಂದು ಅವರ ಪ್ರತಿಮೆ ಅನಾವರಣ ಮಾಡಲಾಗಿದೆ.
ಸಂಚಾರಿ ವಿಜಯ್ ಅವರ ಹುಟ್ಟೂರು ಪಂಚನಹಳ್ಳಿಯ ತೋಟದಲ್ಲಿ ಅವರ ಸಹೋದರರು ವಿಜಯ್ ಅವರ ಪ್ರತಿಮೆ ಅನಾವರಣ ಮಾಡಿದ್ದಾರೆ.
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಜೂನ್ 15 2021 ರಲ್ಲಿ ಅಸ್ತಂಗತರಾಗಿದ್ದಾರೆ. ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದರು.
ತಮ್ಮ ಕೊನೆ ಸಮಯದಲ್ಲಿಯೂ ಅಂಗಾಂಗ ದಾನ ಮಾಡಿದ ಸಂಚಾರಿ ವಿಜಯ್ ಹಲವು ಜನರ ಬದುಕಿಗೆ ಆಸರೆಯಾಗಿದ್ದಾರೆ.