ADVERTISEMENT
ಊರೆಂದರೆ ಹೊಲೆಗೇರಿ ಇರುತ್ತೆ ಎಂದು ನೇರ ಪ್ರಸಾರದಲ್ಲಿ ಹೇಳಿದ್ದ ನಟ ಉಪೇಂದ್ರ ಅವರ ವಿರುದ್ಧ ಬೆಂಗಳೂರಲ್ಲಿ ಎಫ್ಐಆರ್ ದಾಖಲಾಗಿದೆ.
ಎಫ್ಐಆರ್ ದಾಖಲಾದ ಬೆನ್ನಲ್ಲೇ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಉಪೇಂದ್ರ ಅವರು,
ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ, ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ….
ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು ? ಅದರಿಂದ ನನಗೆ ಸಿಗುವ ಲಾಭವಾದರೂ ಏನು ?
ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ಧ್ವೇಷ ?
ಎಂದು ಉಪೇಂದ್ರ ಅವರು ಅಸಮಾಧಾನ ತೋಡಿಕೊಂಡಿದ್ದಾರೆ.
ADVERTISEMENT