ನಟ ದರ್ಶನ್ ತೂಗುದೀಪ ಅವರ ಕ್ರಾಂತಿ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ ದರ್ಶನ್ ಅವರ ನೂತನ ಚಿತ್ರದ ಮುಹೂರ್ತ ಇಂದು ವರಮಹಾಲಕ್ಷ್ಮಿ ಹಬ್ಬದ ದಿನ ಬೆಂಗಳೂರು ನಗರದ ದೇವಸ್ಥಾನವೊಂದರಲ್ಲಿ ನೆರವೇರಿತು.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹೊಸ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳುತ್ತಿದ್ದು, ಆರ್ಟ್ ಆಫ್ ಲಿವಿಂಗ್ ನ ರವಿಶಂಕರ ಗುರೂಜಿಯವರು ಚಿತ್ರದ ಮುಹೂರ್ತಕ್ಕೆ ಚಾಲನೆ ನೀಡಿದರು. ದರ್ಶನ್ ಮತ್ತು ತರುಣ್ ಸುಧೀರ್ ಕಾಂಬಿನೇಷನ್ ನ ಮತ್ತೊಂದು ಚಿತ್ರವಿದು.
ನಟಿ ಮಾಲಾಶ್ರೀಯವರ ಮಗಳು ರಾಧನಾ ರಾಮ್ ಈ ಚಿತ್ರದ ಮೂಲಕ ನಾಯಕಿಯಾಗಿ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಅನನ್ಯ ಅವರ ಹೆಸರು ರಾಧನಾ ರಾಮ್ ಎಂದು ಜನರಿಗೆ ಪರಿಚಯವಾಗಲಿದೆ.
ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಕ್ರಾಂತಿ ಚಿತ್ರಕ್ಕೆ ನೀವು ತೋರಿರುವ ಪ್ರೀತಿ-ಅಭಿಮಾನಕ್ಕೆ ನಾವು ಆಭಾರಿಯಾಗಿದ್ದೇವೆ. ನಮ್ಮ ಚಿತ್ರದ ಹೊಸ ಪೋಸ್ಟರ್ ನಿಮಗಾಗಿ.
Learn to fight alone @mediahousefilms @harimonium @shylajanag @bsuresha @Dbeatsmusik#Kranti #ಕ್ರಾಂತಿ#KrantiBegins #D55 pic.twitter.com/6aQtq6LhX3— Darshan Thoogudeepa (@dasadarshan) August 5, 2022
ಇನ್ನು, ದರ್ಶನ್ ಅಭಿಮಾನಿಗಳಿಗಾಗಿ ಇಂದು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಿತ್ರತಂಡ ಕ್ರಾಂತಿ ಚಿತ್ರದ ಹೊಸ ಪೋಸ್ಟರ್ ನ್ನು ಬಿಡುಗಡೆ ಮಾಡಿದೆ.
ಚಿತ್ರದ ಟೈಟಲ್ ಹಾಗೂ ಇತರೆ ಪಾತ್ರವರ್ಗಗಳನ್ನು ಶೀಘ್ರವೇ ತಿಳಿಸಲಾಗುವುದು ಎಂದು ನಿರ್ದೇಶಕ ತರುಣ್ ಸುದೀರ್ ಹೇಳಿದ್ದಾರೆ.