ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ‘ಸಲಾರ್’ ಇನ್ನು ಒಂದು ವಾರದಲ್ಲಿ ಬಿಡುಗಡೆ ಆಗಲಿದ್ದು, ಇಂದಿನಿಂದ ಸಲಾರ್ ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ.
ಹೌದು ಕರ್ನಾಟಕದಲ್ಲಿ ಇಂದಿನಿಂದ ‘ಸಲಾರ್’’ ಮುಂಗಡ ಟಿಕೆಟ್ ಬುಕಿಂಗ್ ಪ್ರಕ್ರಿಯೆ ಆರಂಭವಾಗಿದ್ದು, ಅತೀ ನಿರೀಕ್ಷಿತ ಸಲಾರ್ ಸಿನಿಮಾದ ಟಿಕೆಟ್ ಅನ್ನು ಇಂದಿನಿಂದ ಖರೀದಿಸಬಹುದು ಎಂದು ಹೊಂಬಾಳೆ ಸಂಸ್ಥೆ ತಿಳಿಸಿದೆ.
ಇಂದು ಸಂಜೆ 6:49ರಿಂದ ಚಿತ್ರದ ಅಡ್ವಾನ್ಸ್ ಬುಕಿಂಗ್ ಪ್ರಾರಂಭವಾಗಿದ್ದು, ಈ ಕುರಿತು ಹೊಂಬಾಳೆ ಸಂಸ್ಥೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.
ಇನ್ನು ‘ಸಲಾರ್’ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಪ್ರಭಾಸ್ ಅವರಿಗೆ ಜೋಡಿಯಾಗಿ ಶ್ರುತಿ ಹಾಸನ್ ನಟಿಸಿದ್ದಾರೆ. ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಅವರು ಕೂಡ ಈ ಸಿನಿಮಾದಲ್ಲಿ ಒಂದು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಅವರ ಗೆಟಪ್ ಕೂಡ ಗಮನ ಸೆಳೆಯುವಂತಿದೆ. ಈ ಮೊದಲು ರಿಲೀಸ್ ಆದ ಟೀಸರ್ ಸಖತ್ ಹೈಪ್ ಸೃಷ್ಟಿ ಮಾಡಿತ್ತು. ಟ್ರೇಲರ್ ಬಿಡುಗಡೆಯಾದರೆ ಹೈಪ್ ಇನ್ನಷ್ಟು ಹೆಚ್ಚಾಗಲಿದೆ. ‘ಕೆಜಿಎಫ್ 2’ ಚಿತ್ರಕ್ಕೆ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ‘ಸಲಾರ್’ ತೆರೆಹಿಂದೆ ಕೆಲಸ ಮಾಡುತ್ತಿದ್ದಾರೆ