ಪೆಟ್ರೋಲ್, ಡೀಸೆಲ್ ಜನಸಾಮಾನ್ಯರಿಗೆ ಪ್ರತಿನಿತ್ಯ ಹೊರೆ ಆಗುತ್ತಿವೆ. ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಲಾಗಿದೆ.
ಶನಿವಾರವಾದ ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ತಲಾ 80 ಪೈಸೆ ಹೆಚ್ಚು ಮಾಡಲಾಗಿದೆ.
ಇಂದು ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 103.91 ರೂಪಾಯಿ ಆಗಿದೆ.
ಶುಕ್ರವಾರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 103.01 ರೂಪಾಯಿ ಇತ್ತು.
ಇಂದು ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ಬೆಲೆ 88.17 ರೂಪಾಯಿ ಆಗಿದೆ.
ಶುಕ್ರವಾರ ಬೆಂಗಳೂರಿನಲ್ಲಿ ಡೀಸೆಲ್ ಬೆಲೆ 87.37ರೂಪಾಯಿ ಇತ್ತು.
ಕಳೆದ ಐದು ದಿನದಲ್ಲಿ ನಾಲ್ಕು ಬಾರಿ ಪೆಟ್ರೋಲ್ ಬೆಲೆ 3.39ರೂಪಾಯಿ ಹೆಚ್ಚಾಗಿದ್ದರೆ, ಡೀಸೆಲ್ ಬೆಲೆಯಲ್ಲಿ ಬರೋಬ್ಬರಿ 3.23ರೂಪಾಯಿಯಷ್ಟು ಹೆಚ್ಚಳವಾಗಿದೆ. ಇದು ಗ್ರಾಹಕನಿಗೆ ಹೊರೆಯಾಗಿ ಪರಿಣಮಿಸುತ್ತಿದೆ.
ಪೆಟ್ರೋಲ್, ಡೀಸೆಲ್ ಬೆಲೆಗಳ ನಿರಂತರ ಹೆಚ್ಚಳದ ಪರಿಣಾಮ ಎಲ್ಲಾ ಅಗತ್ಯ ವಸ್ತುಗಳ ಬೆಲೆಯೂ ನಿಧಾನಕ್ಕೆ ಹೆಚ್ಚಾಗುತ್ತಿದೆ. ಜನಸಾಮಾನ್ಯರ ಜೇಬಿಗೆ ಮತ್ತಷ್ಟು ಹೊರೆ ಆಗುತ್ತಿದೆ.