‘ಅಗ್ನಿಪಥ್’ ಯೋಜನೆ ವಿರೋಧಿಸಿ ಇಂದು ಸೋಮವಾರ ‘ಭಾರತ್ ಬಂದ್’ ಗೆ ಹಲವು ಸಂಘಟನೆಗಳು ಕರೆ ನೀಡಿವೆ.
ಭಾರತ್ ಬಂದ್ ಪ್ರತಿಭಟನೆಯ ಬೆನ್ನಲ್ಲೇ ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜಾರ್ಖಂಡ್ನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 9 ರಿಂದ 11 ನೇ ತರಗತಿವರೆಗಿನ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಭಾರತ ಬಂದ್ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಹಿಂಸಾಕೃತ್ಯಗಳಲ್ಲಿ ಯಾರೇ ತೊಡಗಿಕೊಂರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ಸರ್ಕಾರಿ ಕಚೇರಿಗಳು, ಸೇನಾ ನೇಮಕಾತಿ ಕೇಂದ್ರಗಳು, ಬಿಜೆಪಿ ಮತ್ತು ಹಿಂದೂ ನಾಯಕರಿಗೆ ಸಂಬಂಧಿಸಿದ ಕಚೇರಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಪಂಜಾಬ್ ಸರ್ಕಾರವು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಪ್ರಮುಖ ಕಚೇರಿಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಸದ್ಯ, 20 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.