ಪರಿಶಿಷ್ಟ ಪಂಗಡದ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳಿಗೆ ಮೀಸಲಾತಿ ನೀಡುವ ಸಂಬಂಧ ಸರ್ವಪಕ್ಷಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು.
ಇಂದು, ಬುಧವಾರ ಕಾಂಗ್ರೆಸ್ ಶಾಸಕರಾದ ಪ್ರಿಯಾಂಕ್ ಖರ್ಗೆ, ಭೀಮಾ ನಾಯಕ್, ಅಜಯ್ ಧರ್ಮಸಿಂಗ್ ಮತ್ತಿತರರು ಧರಣಿ ನಡೆಸಿ ಪರಿಶಿಷ್ಟ ಪಂಗಡಕ್ಕೆ ಶೇ.7.5ರ ಮೀಸಲಾತಿ ನೀಡಬೇಕೆಂದು ಎಂದು ಒತ್ತಾಯಿಸಿದರು.
ಅಷ್ಟರಲ್ಲಿ ಸದನಕ್ಕೆ ಆಗಮಿಸಿದ ಮುಖ್ಯಮಂತ್ರಿ, ಮೀಸಲಾತಿ ಕುರಿತಂತೆ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ನೀಡಿದೆ. ಹಿಂದುಳಿದ ವರ್ಗ 3 ಬಿ ನಿಂದ 2ಎ ಗೆ ಹಾಗೂ 2ಎ ನಿಂದ ಎಸ್ಟಿಗೆ ವರ್ಗಾಯಿಸಿ ಮೀಸಲಾತಿ ಸೌಲಭ್ಯ ಕಲ್ಪಿಸಬೇಕೆಂದು ಹಲವು ಸಮುದಾಯಗಳು ಬೇಡಿಕೆ ಇಟ್ಟಿವೆ. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸುಭಾಷ್ ಆಡಿ ನೇತೃತ್ವದ ಸಮಿತಿ ರಚಿಸಲಾಗಿದ್ದು, ಈ ಸಮಿತಿಯು ಒಂದು ವಾರ ಅಥವಾ 10 ದಿನಗಳಲ್ಲಿ ಮಧ್ಯಂತರ ವರದಿ ನೀಡಲಿದೆ. ಸುಪ್ರೀಂಕೋರ್ಟ್ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಬಗ್ಗೆ ರಾಜ್ಯದ ಅಡ್ವೋಕೇಟ್ ಜನರಲ್ ಅವರಿಂದ ವರದಿ ಪಡೆದು ಶೀಘ್ರವೇ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
https://youtu.be/1i2PGMp1-e8