ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್ ಸಿಂಗ್ (Minister Anand Singh) ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ (Minister Anand Singh) ಹಾಗೂ ಇತರೆ ಮೂವರ ವಿರುದ್ಧ ವಿಜಯನಗರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.
ಡಿ.ಪೋಲಪ್ಪ ಎಂಬುವರು ಕೊಟ್ಟ ದೂರಿನ ಮೇರೆಗೆ ಐ.ಪಿ.ಸಿ. ಸೆಕ್ಷೆನ್ 504, 506ರ ಅಡಿ ಎಸ್ಸಿ/ಎಸ್ಟಿ ಕಾಯ್ದೆ ಅನ್ವಯ ಆನಂದ್ ಸಿಂಗ್, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ.
ಇದನ್ನೂ ಓದಿ : ಆರದ ಅಸಮಾಧಾನ ಕಿಡಿ: ದೆಹಲಿಗೆ ತೆರಳಿದ ಸಚಿವ ಆನಂದ್ ಸಿಂಗ್
ಪೆಟ್ರೋಲ್ ಹಾಕಿ ಸುಟ್ಟು ಹಾಕುತ್ತೇನೆ ಎಂದು ಸಚಿವ ಆನಂದ್ ಸಿಂಗ್ ಅವರು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು ಅವರ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮಂಗಳವಾರ ಸಂಜೆ ನಗರದ ಎಸ್ಪಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ತಡೆದು, ಆಸ್ಪತ್ರೆಗೆ ಕಳುಹಿಸಿದ್ದಾರೆ.