ನ್ಯಾಯಮೂರ್ತಿ ಅಲೋಕ್ ಆರಾಧೆಯವರನ್ನು ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ.
ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯಾಗಿರುವ ರುತುರಾಜ್ ಅವಸ್ಥಿಯವರ ಅಧಿಕಾರಾವಧಿ ಇದೇ ಜುಲೈ 2 ರಂದು ಕೊನೆಗೊಳ್ಳಲಿದೆ.
ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ಅಲೋಕ್ ಆರಾಧೆಯವರನ್ನು ನೇಮಕ ಮಾಡಿರುವ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.
My best wishes to Justice Alok Aradhe! pic.twitter.com/hBQuEGTXDJ
— Kiren Rijiju (मोदी का परिवार) (@KirenRijiju) June 30, 2022
ನ್ಯಾಯಮೂರ್ತಿ ಅಲೋಕ್ ಆರಾಧೆ ಅವರು ಕರ್ನಾಟಕ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಜುಲೈ 3 ರಂದು ಮುಖ್ಯನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.