ಮಾಜಿ ಮುಖ್ಯಮಂತ್ರಿ ಮತ್ತು ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ (Amarindar Singh) ಮುಂದಿನ ವಾರ ಬಿಜೆಪಿ ಸೇರುವ ಸಾಧ್ಯತೆ ಇದೆ ಬಿಜೆಪಿ ಎಂದು ಪಕ್ಷದ ವಕ್ತಾರರು ಇಂದು ತಿಳಿಸಿದ್ದಾರೆ.
ಅಮರಿಂದರ್ ಸಿಂಗ್ ಅವರು ಹೊಸದಾಗಿ ಸ್ಥಾಪಿಸಿದ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ.
80ರ ವರ್ಷದ ಕ್ಯಾಪ್ಟನ್ ಅಮರಿಂದರ್ ಸಿಂಗ್ (Amarindar Singh) ಅವರನ್ನು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತ್ತು. ಅನಂತರ ಅವರು ಪಂಜಾಬ್ ಲೋಕ ಕಾಂಗ್ರೆಸ್ (PLC) ಪಕ್ಷವನ್ನು ಸ್ಥಾಪನೆ ಮಾಡಿದ್ದರು.
ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಪಂಜಾಬ್ನ 10 ಎಎಪಿ ಶಾಸಕರನ್ನು ಸಂಪರ್ಕಿಸಿದ ಬಿಜೆಪಿ – ಅರವಿಂದ್ ಕೇಜ್ರಿವಾಲ್ ಆರೋಪ