545 ಪಿಎಸ್ಐ ಹುದ್ದೆಗಳಿಗೆ ನಡೆದ ನೇಮಕಾತಿಯ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಎಡಿಜಿಪಿ ಅಮೃತ್ ಪೌಲ್ ಅವರನ್ನು ಇಂದು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿಯವರು ಸಿಐಡಿ ತನಿಖೆಗೆ ಬೆನ್ನುತಟ್ಟಿ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಚೀಮಾರಿ ಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ?
PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ರಾಜ್ಯ ಮುಖ್ಯಮಂತ್ರಿಗಳು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸುವ ಮೂಲಕ ಸರ್ಕಾರಕ್ಕೆ ಚೀಮಾರಿ ಹಾಕಿದ್ದಾರೆ.
PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. @CMofKarnataka ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು.
2/2#PSIScam pic.twitter.com/IkVBWWCfFN— Siddaramaiah (@siddaramaiah) July 4, 2022
ಈ ಪ್ರಕರಣದ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕಾಂಗ ಹೆಚ್ಡಿ ಕುಮಾರಸ್ವಾಮಿಯವರು, ಪಿಎಸ್ಐ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದು, ಇಂದು ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿಯನ್ನೇ ಬಂಧಿಸಿರುವ ಘಟನೆ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ. ಸಿಐಡಿ ತನಿಖಾ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು
ಸಿಐಡಿ ನೇತೃತ್ವ ವಹಿಸಿರುವ ದಕ್ಷ ಅಧಿಕಾರಿ, ಪಿ.ಎಸ್.ಸಂಧು ಅವರು, ಎಷ್ಟೇ ರಾಜಕೀಯ ಮತ್ತು ಅಧಿಕಾರಿಶಾಹಿ ಮಟ್ಟದಲ್ಲಿ ಒತ್ತಡ ಎದುರಾದರೂ ಮಣಿಯದೆ ತನಿಖಾ ತಂಡವನ್ನು ಮುನ್ನಡೆಸಿದ್ದಾರೆ. ಅವರಿಗೆ ಅಭಿನಂದನೆಗಳು
ಇನ್ನು, ಪಿಎಸ್ಐ ಕರ್ಮಕಾಂಡದ ತನಿಖೆಯಲ್ಲಿ ಸಿಐಡಿ ಸಾಗಬೇಕಿರುವ ದೂರ ಬಹಳಷ್ಟಿದೆ. ಕೆಳ, ಹಿರಿಯ ಹಂತದ ಅಧಿಕಾರಿಗಳ ಜತೆಗೆ ಸರಕಾರದ ಮಟ್ಟದಲ್ಲಿ ಅತ್ಯಂತ ಪ್ರಭಾವೀ ಸ್ಥಾನಗಳಲ್ಲಿರುವ ಕಿಂಗ್ ಪಿನ್ ಗಳನ್ನು ಸಿಐಡಿ ಹಿಡಿಯಬೇಕಿದೆ. ಯಾವುದೇ ಕಾರಣಕ್ಕೂ ಈ ಪ್ರಭಾವಿಗಳು ತಪ್ಪಿಸಿಕೊಳ್ಳಬಾರದು.
ಇನ್ನು, ಪಿಎಸ್ಐ ಕರ್ಮಕಾಂಡದ ತನಿಖೆಯಲ್ಲಿ ಸಿಐಡಿ ಸಾಗಬೇಕಿರುವ ದೂರ ಬಹಳಷ್ಟಿದೆ. ಕೆಳ, ಹಿರಿಯ ಹಂತದ ಅಧಿಕಾರಿಗಳ ಜತೆಗೆ ಸರಕಾರದ ಮಟ್ಟದಲ್ಲಿ ಅತ್ಯಂತ ಪ್ರಭಾವೀ ಸ್ಥಾನಗಳಲ್ಲಿರುವ ಕಿಂಗ್ ಪಿನ್ ಗಳನ್ನು ಸಿಐಡಿ ಹಿಡಿಯಬೇಕಿದೆ. ಯಾವುದೇ ಕಾರಣಕ್ಕೂ ಈ ಪ್ರಭಾವಿಗಳು ತಪ್ಪಿಸಿಕೊಳ್ಳಬಾರದು.4/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 4, 2022
ನಾನು ಮೊದಲೇ ಹೇಳಿದ್ದೆ. ಪಿಎಸ್ಐ ಹಗರಣದಲ್ಲಿ ಒಬ್ಬರು ಮಹಾನ್ ಕಿಂಗ್ ಪಿನ್ ಇದ್ದಾರೆ. ಅವರ ಹೆಸರು ಹೇಳಿದರೆ ಸರಕಾರವೇ ಬಿದ್ದು ಹೋಗುತ್ತದೆ. ಹೀಗೆ ಹೇಳಿದಾಗ ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡ್ತಾರೆ ಎಂದಿದ್ದರು. ದಾಖಲೆ ಕೊಡಿ ಎಂದಿದ್ದರು. ಈಗ ಅವರು ಏನು ಹೇಳುತ್ತಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.