ಭ್ರಷ್ಟಾಚಾರ ನಿಗ್ರಹ ದಳವನ್ನು (ACB) ಕರ್ನಾಟಕ ಹೈಕೋರ್ಟ್ ಎದ್ದು ಮಾಡಿರುವುದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಕಾಂತರಾಜು ಎಂಬುವರ ಪರವಾಗಿ ವಕೀಲ ಅಶೋಕ್ ಪಾಣಿಗ್ರಾಹಿ ಅವರು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಎದುರು ಖಾಸಗಿ ಅರ್ಜಿ ಸಲ್ಲಿಸಿದ್ದಾರೆ.
ಈ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಹೈಕೋರ್ಟ್ ಎಸಿಬಿ(ACB) ಯನ್ನು ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಅಧಿಕಾರ ವರ್ಗಾಯಿಸಿತ್ತು.
ಇದನ್ನೂ ಓದಿ : ಎಸಿಬಿಯೇ ಅತಿದೊಡ್ಡ ಭ್ರಷ್ಟರ ಕೂಪ, ADGPಯೇ ಕಳಂಕಿತ ಅಧಿಕಾರಿ – ಹೈಕೋರ್ಟ್ ಕೆಂಡಾಮಂಡಲ
ಹಣಕ್ಕಾಗಿ ಬೇಡಿಕೆ ಸಲ್ಲಿಸಿದ ಬೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಎಸಿಬಿಯಲ್ಲಿ ದೂರು ಸಲ್ಲಿಸಿದ್ದರು. ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಹಸ್ತಾಂತರ ಮಾಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿರುವುದರಿಂದ ತನಿಖೆಗೆ ತೊಂದರೆ ಆಗಿದೆ’ ಎಂದು ಅರ್ಜಿದಾರ ಅರ್ಜಿಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ನೌಕರರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣಗಳ ತನಿಖೆ ನಡೆಸಲು 2016ರಲ್ಲಿ ರಚಿಸಲಾಗಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು 2022ರ ಆಗಸ್ಟ್ 11ರಂದು (ಎಸಿಬಿ) ರದ್ದುಗೊಳಿಸಿದ್ದ ಹೈಕೋರ್ಟ್, ಎಸಿಬಿ ವ್ಯಾಪ್ತಿಯಲ್ಲಿ ಸದ್ಯ ತನಿಖೆಗೆ ಒಳಪಟ್ಟಿರುವ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸಬೇಕು ಎಂದು ಮಹತ್ವದ ತೀರ್ಪು ನೀಡಿ ಆದೇಶ ಹೊರಡಿಸಿತ್ತು.