ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ.
ತಿರುಪತಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪುತಲಪಟ್ಟು ಮಂಡಲದ ಪಿ. ಕೊಟ್ಟಕೋಟದಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಎಸ್ ಐ ಸೇರಿದಂತೆ ಕೆಲವು ಸಿಬ್ಬಂದಿಗೆ ಗಾಯಗಳಾಗಿದ್ದು, ಚಿತ್ತೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಚಿತ್ತೂರು ಡಿವೈಎಸ್ ಪಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಸಿಬ್ಬಂದಿ ಸಾವಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಂಬನಿ ಮಿಡಿದಿದ್ದಾರೆ.