ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರಸ್ತುತ ತುಮಕೂರು ಹಾಗೂ ಬೀದರ್ನಲ್ಲಿ ಈ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳ ಮಾಹಿತಿ ಹೀಗಿದೆ.
ಹುದ್ದೆ ವಿವರ:
ತುಮಕೂರು ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಒಟ್ಟು 384 ಅಂಗನಾಡಿಯಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅಂಗನಾಡಿ ಕಾರ್ಯಕರ್ತರು – 106
ಅಂಗನಾಡಿ ಸಹಾಯಕರು – 278
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿಯನ್ನು ಪೂರ್ಣಗೊಳಿಸಿರಬೇಕು. ಅಂಗನಾಡಿ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 19 ರಿಂದ 35 ವರ್ಷದ ವಯೋಮಿತಿ ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜನವರಿ 10 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 5 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು karnemakaone.kar.nic.in/abcd/ApplicationForm_JA_org.aspx ಇಲ್ಲಿಗೆ ಭೇಟಿ ನೀಡಬಹುದಾಗಿದೆ.