ಖ್ಯಾತ ನಟ ಅರ್ಜುನ್ ಸರ್ಜಾ ತಾಯಿ ಧ್ರುವ ಸರ್ಜಾ ಅಜ್ಜಿ, ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಇಂದು ಮಾಧ್ಯಾಹ್ನ 12 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎನ್ನು ಮಾಹಿತಿ ಲಭ್ಯವಾಗಿದೆ. ಲಕ್ಷ್ಮೀದೇವಿ ಅವರಿಗೆ 84 ವರ್ಷ ವಯಸ್ಸಾಗಿತ್ತು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು ಕಳೆದ 22 ದಿಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮೀದೇವಿ ಇಹಲೋಕ ತ್ಯಜಿಸಿದ್ದಾರೆ.
ತಾಯಿಯ ಅನಾರೋಗ್ಯದ ಹಿನ್ನಲ್ಲೇ ಅರ್ಜುನ್ ಸರ್ಜಾ ಬೆಂಗಳೂರಿನಲ್ಲೇ ಇದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಲಕ್ಷ್ಮೀದೇವಿ ಖ್ಯಾತ ನಟ ಶಕ್ತಿ ಪ್ರಸಾದ್ ಜೊತೆ ವಿವಾಹ ಆಗಿದ್ದರು.