ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ಕಾರಣರಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದಾರೆ.
ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಪು ಗ್ರಾಮ ಪಂಚಾಯತ್ನ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು.
ಆರ್ಯಪು ಗ್ರಾಮ ಪಂಚಾಯತ್ ಕ್ಷೇತ್ರದಲ್ಲಿ ಪುತ್ತಿಲ ಅವರ ಆಪ್ತ ಸುಬ್ರಹ್ಮಣ್ಯ ಬಲ್ಯಾಯ ಅವರು 499 ಮತಗಳನ್ನು ಪಡೆದು 146 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ 2ನೇ ಸ್ಥಾನಕ್ಕೆ ಮತ್ತು ಬಿಜೆಪಿ ಅಭ್ಯರ್ಥಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ADVERTISEMENT
ADVERTISEMENT