ಅಸ್ಸಾಂನಲ್ಲಿ ಬಾರಿ ಮಳೆಯಾಗುತ್ತಿದ್ದು ನಾಗಾಂವ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದ ಸೆಳೆತಕ್ಕೆ ಸಿಕ್ಕಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಮತ್ತು ಕಾನ್ ಸ್ಟೆಬಲ್ ಕೊಚ್ಚಿಹೋಗಿದ್ದಾರೆ.
ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಜನರಿಗೆ ಸಹಾಯ ಮಾಡಲು ಪ್ರಭಾರಿ ಅಧಿಕಾರಿ ಸಮುಜ್ಜಲ್ ಕಾಕತಿ ಮತ್ತು ಕಾನ್ ಸ್ಟೆಬಲ್ ಮೃತಪಟ್ಟಿದ್ದು ಮತ್ತಿಬ್ಬರನ್ನು ರಕ್ಷಿಸಲಾಗಿದೆ. ಸಮುಜ್ಜಲ್ ಕಾಕತಿ ಹಾಗೂ ರಾಜೀಬ್ ಬೊರ್ಡೊಲೊಯ್ ಅವರ ಮೃತದೇಹ ಇಂದು ಪತ್ತೆಯಾಗಿದೆ.
ಅಸ್ಸಾಂನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಾವಿನ ಸಂಖ್ಯೆ 72ಕ್ಕೆ ಏರಿಕೆಯಾಗಿದ್ದು, 40 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೇಘಾಲಯದಲ್ಲಿ ಕಳೆದ ಎರಡು ತಿಂಗಳಲ್ಲಿ ಹಠಾತ್ ಪ್ರವಾಹ ಮತ್ತು ಭೂಕುಸಿತದಲ್ಲಿ 30 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.