ನಕಲಿ ಗೊಬ್ಬರ ತಯಾರಿಕೆ ಅಡ್ಡೆಯ (Fake Fertilizser Manufacturing Unit) ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಡಕಳ್ಳಿ ಬಳಿಯ ಹಳೆ ಕೋಳಿ ಫಾರಂ ಒಂದರಲ್ಲಿ ನಕಲಿ ಗೊಬ್ಬರ ತಯಾರಿಸಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಮೈಸೂರು ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಮಧುಲತಾ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಹಲವು ಸಲಕರಣೆಗಳು ಪತ್ತೆಯಾಗಿವೆ. ಅಸಲಿ ಗೊಬ್ಬರಕ್ಕೆ ಮಿಶ್ರಣ ಮಾಡಲು ಶೇಖರಿಸಿಟ್ಟಿದ್ದ ಜೇಡಿಮಣ್ಣಿನ ಚೀಲಗಳು, ಯಂತ್ರೋಪಕರಣಗಳು ಪತ್ತೆಯಾಗಿವೆ. ಈ ಕುರಿತು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹಳೆಯ ಕೋಳಿ ಫಾರಂ ಬಾಡಿಗೆಗೆ ಪಡೆದು ನಕಲಿ ಗೊಬ್ಬರ ತಯಾರಿಸಲಾಗುತ್ತಿತ್ತು. ಮೈಸೂರು ಮೂಲದ ಮಹೇಶ್ ಎಂಬ ವ್ಯಕ್ತಿಯಿಂದ ನಕಲಿ ಗೊಬ್ಬರ ತಯಾರಿಕೆ ದಂಧೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.