ಬಿಜೆಪಿ (BJP) ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಗೆ ನೇಮಕ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ( J P Nadda) ಅವರಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (B S Yediyurappa) ಅವರು ಕೃತಜ್ಞತೆ ಮತ್ತು ಧನ್ಯವಾದ ಸಲ್ಲಿಸಿದ್ದಾರೆ.
ಇವತ್ತು ನವದೆಹಲಿಯಲ್ಲಿ ಪ್ರಧಾನಿ ಮೋದಿ ಮತ್ತು ನಡ್ಡಾ ಅವರನ್ನು ಯಡಿಯೂರಪ್ಪ ಭೇಟಿ ಆದರು.
ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿಗೆ ನೇಮಕವಾದ ಬಳಿಕ ಯಡಿಯೂರಪ್ಪ ಅವರ ಮೊದಲ ಭೇಟಿ ಇದಾಗಿದೆ. ಅಲ್ಲದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ದೆಹಲಿಯಲ್ಲಿ ಪ್ರಧಾನಿ ಮೋದಿ ಮತ್ತು ನಡ್ಡಾ ಇಬ್ಬರನ್ನೂ ಯಡಿಯೂರಪ್ಪ ಭೇಟಿ ಆಗ್ತಿರುವುದು ಇದೇ ಮೊದಲು.
B S Yediyurappa meets Prime Minister Modi 1
ಸಂಸದೀಯ ಮಂಡಳಿ ಬಿಜೆಪಿಯಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳುವ ಅತ್ಯುನ್ನತ ಸಮಿತಿ ಆಗಿದೆ.
ರಾಜ್ಯದ ಸದ್ಯದ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಇಂದು ನವದೆಹಲಿಯಲ್ಲಿ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ @narendramodiರವರನ್ನು ಭೇಟಿ ಮಾಡಿ ಪಕ್ಷದ ಸಂಸದೀಯ ಮಂಡಳಿಯಲ್ಲಿ ಹಾಗೂ ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿ, ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
B S Yediyurappa meets BJP president J P Nadda
ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ರವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಲಾಯಿತು. ಪಕ್ಷದ ಉನ್ನತ ಸಮಿತಿಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶಕ್ಕಾಗಿ ಧನ್ಯವಾದ ಸಲ್ಲಿಸಿ, ರಾಜ್ಯದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಪ್ರಮುಖ ವಿದ್ಯಮಾನಗಳ ಕುರಿತು ಮಾನ್ಯ ನಡ್ಡಾಜಿ ಅವರೊಂದಿಗೆ ವಿವರವಾಗಿ ಚರ್ಚಿಸಲಾಯಿತು.
ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....
ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್ ಪತ್ನಿ ಜಿಲ್ ಬಿಡೆನ್ಗೆ ಪ್ರಧಾನಿ...