ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಲಘು ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರ ಶೀಘ್ರ ಚೇತರಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಟ್ವೀಟ್ ಮೂಲಕ ಆಶಯ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ವಿಜಯೇಂದ್ರ ಅವರು – ‘ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಗರುಡಾಚಾರ್ ಅವರಿಗೆ ಲಘು ಹೃದಯಾಘಾತ ಉಂಟಾಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಿ ಎಂದಿನಂತೆ ಎಲ್ಲರೊಂದಿಗೆ ಬೆರೆಯುವಂತಾಗಲಿ ಎಂದು ಹಾರೈಸುತ್ತೇನೆ.’ ಎಂದು ಬರೆದುಕೊಂಡಿದ್ದಾರೆ.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಉದಯ್ ಗರುಡಾಚಾರ್ ಅವರಿಗೆ ಲಘು ಹೃದಯಾಘಾತ ಉಂಟಾಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಿ ಎಂದಿನಂತೆ ಎಲ್ಲರೊಂದಿಗೆ ಬೆರೆಯುವಂತಾಗಲಿ ಎಂದು ಹಾರೈಸುತ್ತೇನೆ. pic.twitter.com/bM8VSMv4dL
— Vijayendra Yediyurappa (Modi Ka Parivar) (@BYVijayendra) January 18, 2024