2002ರಲ್ಲಿ ಗುಜರಾತ್ನಲ್ಲಿ ನಡೆದ ಬಾಬ್ರಿ ಮಸೀದಿಗೆ (Babri Masjid Case) ಸಂಬಂಧಿಸಿದ ಎಲ್ಲ ಪ್ರಕರಣಗಳನ್ನೂ ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಈ ಪ್ರಕರಣಗಳು ಈಗ “ಸಮಯದ ಜೊತೆಗೂಡಲು ಅಸಮರ್ಥವಾಗಿವೆ” ಎಂದು ದೇಶದ ಸರ್ವೋಚ್ಛ ನ್ಯಾಯಾಲಯವು ಹೇಳಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ (Babri Masjid Case) ಸಂಬಂಧಿಸಿದ ಒಂಬತ್ತು ಪ್ರಕರಣಗಳ ಪೈಕಿ ಎಂಟು ಪ್ರಕರಣಗಳ ವಿಚಾರಣೆಯನ್ನು ಮುಕ್ತಾಯಗೊಳಿಸಲಾಗಿದೆ. ಪ್ರಸ್ತುತ ಗುಜರಾತ್ನ (Gujarat) ನರೋಡಾ ಗಾಂವ್ನಲ್ಲಿರುವ ವಿಚಾರಣಾ ನ್ಯಾಯಾಲಯದಲ್ಲಿ ಅಂತಿಮ ವಾದಗಳು ನಡೆಯುತ್ತಿವೆ ಎಂದು ನ್ಯಾಯಾಲಯ ತಿಳಿಸಿದೆ. ಅಲ್ಲದೇ, ಕಾಲಾನಂತರದಲ್ಲಿ ಈ ಪ್ರಕರಣಗಳು ಈಗ ನಿರುಪಯುಕ್ತವಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
SC closes all proceedings arising out of 2002 riots in Gujarat. A batch of pleas was pending before SC. SC says cases have now become infructuous with passage of time, trials in 8 out of 9 cases are over&final arguments are going on in one case in trial court, Naroda Gaon,Gujarat pic.twitter.com/1db5ANs1AQ
— ANI (@ANI) August 30, 2022
ಇದನ್ನೂ ಓದಿ : ಬಾಬ್ರಿ ಮಸೀದಿ ಧ್ವಂಸ ಕೇಸ್ನಲ್ಲಿ 32 ಮಂದಿಯನ್ನು ಖುಲಾಸೆಗೊಳಿಸಿದ್ದ ಜಡ್ಜ್ಗೆ ಉತ್ತರಪ್ರದೇಶ ಉಪ ಲೋಕಾಯುಕ್ತ ಹುದ್ದೆ
ನವೆಂಬರ್ 9, 2019 ರಂದು, ಸುಪ್ರೀಂ ಕೋರ್ಟ್ ಅಯೋಧ್ಯೆಯ ಸಂಪೂರ್ಣ ವಿವಾದಿತ ಪ್ರದೇಶವನ್ನು ರಾಮ ಮಂದಿರವನ್ನು ನಿರ್ಮಿಸಲು ಆದೇಶ ನೀಡಿತ್ತು. ಅಯೋಧ್ಯೆಯಲ್ಲಿ 5 ಎಕರೆ ಪರ್ಯಾಯ ಭೂಮಿಯನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಗೆ ನಿರ್ಮಾಣಕ್ಕಾಗಿ ನೀಡಿತ್ತು.
ಅಯೋಧ್ಯೆಯಲ್ಲಿದ್ದ ಬಾಬ್ರಿ ಮಸೀದಿ ಕಟ್ಟಡವನ್ನು 1992ರಲ್ಲಿ ಕರಸೇವಕರು ಕೆಡವಿಹಾಕಿದ ಘಟನೆ ಸಂಬಂಧ 2020ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಬಾಬರಿ ಮಸೀದಿ ಧ್ವಂಸ ಮಾಡಿದ್ದು ಪೂರ್ವನಿಯೋಜಿತ ಎಂದು ಅನಿಸುವುದಕ್ಕೆ ಪ್ರಬಲ ಸಾಕ್ಷ್ಯಾಧಾರಗಳು ಇಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಎಲ್ಲಾ 32 ಆರೋಪಿಗಳನ್ನ ಖುಲಾಸೆಗೊಳಿಸಿತ್ತು. ಲಕ್ನೋ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠ 2 ಸಾವಿರ ಪುಟಗಳ ತೀರ್ಪನ್ನು ಪ್ರಕಟಿಸಿತ್ತು.
ಇದನ್ನೂ ಓದಿ : ಬಾಬ್ರಿ ಮಸೀದಿ ವಿವಾದ ತೀರ್ಪು ಪ್ರಕಟ: ಎಲ್ಲಾ ಆರೋಪಿಗಳು ನಿರ್ದೋಷಿಗಳೆಂದ ಕೋರ್ಟ್