ಕರ್ನಾಟಕ ಅರಣ್ಯ ಇಲಾಖೆ (Karnataka Forest Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 540 ಫಾರೆಸ್ಟ್ ಗಾರ್ಡ್ (Forest Watcher) ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಡಿ.30ರ ಒಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ:
ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.
ವೇತನ:
ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 23,500-47,650 ರೂ. ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬೇಕಿದ್ದು,
ಪ.ಜಾ, ಪ. ಪಂ ಮತ್ತು ಪ್ರವರ್ಗ 1 ಪುರುಷ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 120 ರೂ.ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 70 ರೂ.ಪ್ರವರ್ಗ 2ಎ, 2ಬಿ, 3ಎ, 3ಬಿ ಪುರುಷ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 220 ರೂ.ಪ್ರವರ್ಗ 2ಎ, 2ಬಿ, 3ಎ, 3ಬಿ ಮಹಿಳಾ ಅಭ್ಯರ್ಥಿಗಳಿಗೆ 120 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ, ದಾಖಲಾತಿ ಪರೀಕ್ಷೆ, ದೈಹಿಕ ಗುಣಮಟ್ಟ, ದೈಹಿಕ ಸಾಮರ್ಥ್ಯ, ಶ್ರವಣ ಹಾಗು ದೃಷ್ಟಿ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಡಿಸೆಂಬರ್ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್ 30. ಶುಲ್ಕ ಪಾವತಿಗೆ ಕಡೆಯ ದಿನಾಂಕ ಜನವರಿ 5. ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು kfdrecruitment.in ಇಲ್ಲಿಗೆ ಭೇಟಿ ನೀಡಿ.