ಜಮ್ಮು ಕಾಶ್ಮೀರದಲ್ಲಿ ಶಾಲಾ ಶಿಕ್ಷಕಿಯ ಗುಂಡಿಟ್ಟು ಕೊಂದ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ಉದ್ಯೋಗಿಯನ್ನು ಕೊಂದಿರುವ ದಾರುಣ ಘಟನೆ ನಡೆದಿದೆ. ಕಣಿವೆ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ಸರಣಿಯಾಗಿ ನಡೆಯುತ್ತಿರುವ ಭಯೋತ್ಪಾದಕರ ಕೃತ್ಯದಿಂದ ಭಯಭೀತ ವಾತಾವರಣ ನಿರ್ಮಾಣವಾಗಿದೆ.
ಜಮ್ಮು ಕಾಶ್ಮೀರದ ಕುಲ್ಗಾಮ್ನಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರನ್ನು ಉಗ್ರರು ಗುಂಡಿಟ್ಟು ಕೊಂದಿದ್ದಾರೆ.
ಮೃತ ಉದ್ಯೋಗಿ ರಾಜಸ್ಥಾನ ಮೂಲದ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಇಲಾಖಾಹಿ ದೇಹತಿ ಬ್ಯಾಂಕ್ ನಲ್ಲಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರವಷ್ಟೇ ಕುಲ್ಗಾಮ್ನಲ್ಲಿ ಶಾಲಾ ಶಿಕ್ಷಕಿಯೊಬ್ಬರನ್ನು ತರಗತಿಯಲ್ಲಿ ಮಕ್ಕಳ ಎದುರೇ ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದರು. ಇದಕ್ಕಿಂತಲೂ ಕೆಲವು ದಿನಗಳ ಹಿಂದೆ ಕಾಶ್ಮೀರಿ ಪಂಡಿತ್ ಭಟ್ ಅವರನ್ನು ಉಗ್ರರು ಗುಂಡಿಟ್ಟು ಕೊಂದಿದ್ದರು. ಈ ವೇಳೆ ಈ ಕಣಿವೆ ಪ್ರದೇಶದಲ್ಲಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು.