ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ವೇದಿಕೆ ಸಜ್ಜಾಗಿದೆ. ಬಿಬಿಎಂಪಿ ವಾರ್ಡ್ಗಳ ಸಂಖ್ಯೆಯನ್ನು 198ನಿಂದ 243ಕ್ಕ ಏರಿಸುವ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ,
ಕರಡು ಪ್ರಕಟಣೆಯಲ್ಲಿದ್ದ ವಾರ್ಡ್ ಗಳೇ ಅಂತಿಮ ಅಧಿಸೂಚನೆಯಲ್ಲಿ ಇವೆ. ವಿಧಾನಸಭಾವಾರು ವಾರ್ಡ್ ಗಳ ಸಂಖ್ಯೆಯಲ್ಲಿ ಕರಡು ಅಧಿಸೂಚನೆಯಲ್ಲಿದ್ದಂತೆ ಮುಂದುವರಿಸಿಕೊಂಡು ಹೋಗಲಾಗಿದೆ.
ವಾರ್ಡ್ ಪುನರ್ವಿಂಗಡಣೆಯ ಅಂತಿಮ ಅಧಿಸೂಚನೆ ಪ್ರಕಟ ಆದ ಎರಡು ವಾರಗಳಲ್ಲಿ ಚುನಾವಣೆ ಘೋಷಣೆ ಮಾಡುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗಕ್ಕೆ ಈ ಹಿಂದೆ ಸುಪ್ರೀಂಕೋರ್ಟ್ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಈ ತಿಂಗಳೇ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಬಿಬಿಎಂಪಿ ಚುನಾವಣೆ ಘೋಷಣೆ ಆಗುವ ನಿರೀಕ್ಷೆ ಇದೆ.