ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸನ್ನಿಹಿತವಾಗಿದೆ. ರಾಜ್ಯ ಚುನಾವಣಾ ಆಯೋಗ ಚುನಾವಣಾಧಿಕಾರಿಗಳನ್ನು ನೇಮಿಸಿ ಅದೇಶ ಹೊರಡಿಸಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ವಿಶೇಷ ಆಯುಕ್ತರು ಹಾಗೂ ದಕ್ಷಿಣ ಮತ್ತು ಮಹದೇವಪುರ ವಲಯದ ಜಂಟಿ ಆಯುಕ್ತರನ್ನು ಜಿಲ್ಲಾ ಚುನಾವಣಾಧಿಕಾರಿಗಳು ಎಂದು ನೇಮಿಸಿದೆ.
ಜಂಟಿ ಮತ್ತು ಉಪ ಆಯುಕ್ತರನ್ನು ಅಧಿಕ ಚುನಾವಣಾ ಜಿಲ್ಲಾಧಿಕಾರಿಗಳೆಂದು ನೇಮಿಸಿದೆ.
ಬಿಬಿಎಂಪಿ ಚುನಾವಣೆಗೆ ಮತದಾರರ ಪಟ್ಟಿ ಸಿದ್ಧಪಡಿಸಲು ಸೂಚಿಸಿದೆ.
ಜೊತೆಗೆ ಚುನಾವಣಾ ಪ್ರಕ್ರಿಯೆ ಆರಂಭಿಸಲು ಸೂಚಿಸಿದೆ