ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಕಾಂಗ್ರೆಸ್ ಮಾಜಿ ಶಾಸಕ ಭೀಮಾನಾಯ್ಕ್ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆ ಆಗಿದ್ದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದರು.
ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾನಾಯ್ಕ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 14 ಒಕ್ಕೂಟದ ಪ್ರತಿನಿಧಿಗಳು, ಪಶುಸಂಗೋಪನಾ ಇಲಾಖೆ ನಿರ್ದೇಶಕ, ಸಹಕಾರ ಇಲಾಖೆ ರಿಜಿಸ್ಟಾರ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಒಬ್ಬರು ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 18 ಮಂದಿ ಮತದಾನದ ಹಕ್ಕು ಹೊಂದಿದ್ದರು.
ಅಮುಲ್ ಬಳಿಕ ಕೆಎಂಎಫ್ ದೇಶದಲ್ಲಿ ಎರಡನೇ ಅತೀ ದೊಡ್ಡ ಹಾಲು ಒಕ್ಕೂಟವಾಗಿದೆ.
ADVERTISEMENT
ADVERTISEMENT