ಬೆಳಗಾವಿಯಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ರಾಜ್ಯ ಸರ್ಕಾರ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ.
ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಕಲ್ಪಿಸುವ ಉದ್ದೇಶದಿಂದ ಸಂತ್ರಸ್ತೆಗೆ 2.03 ಎಕರೆ ಜಮೀನು ಮಂಜೂರು ಮಾಡಲು ಆದೇಶಿಲಾಗಿದೆ ಅಂತ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.
ಈ ಘಟನೆಗೆ ರಾಜ್ಯವ್ಯಾಪಿ ಪ್ರತಿಭಟನೆ ನಡೆದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯನ್ನು ಈಗಾಗಲೇ ರಚನೆ ಮಾಡಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರ ಕೂಡ ಸಂತ್ರಸ್ತ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಸದ್ಯ ಜಮೀನು ನೀಡುವ ಮೂಲಕ ಇದೀಗ ರಾಜ್ಯ ಸರ್ಕಾರ ಸಂತ್ರಸ್ತೆ ಪರ ನಿಂತಿದ್ದು ಆಕೆಯಲ್ಲಿ ಧೈರ್ಯ ಮೂಡಿಸಿದೆ.