ADVERTISEMENT
ಅಧಿಕಾರಕ್ಕೆ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಪ್ರಮುಖ ವರ್ಗಾವಣೆ ಮಾಡಿದೆ.
ಬೆಂಗಳೂರು ನಗರದ ಹೊಸ ಪೊಲೀಸ್ ಆಯುಕ್ತರಾಗಿ ಬಿ ದಯಾನಂದ ಅವರು ನೇಮಕಗೊಂಡಿದ್ದಾರೆ. ಇಲ್ಲಿಯವರೆಗೆ ಅವರು ಗುಪ್ತಚರ ದಳ ಎಡಿಜಿಪಿ ಆಗಿದ್ದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸಿ ಹೆಚ್ ಪ್ರತಾಪ್ರೆಡ್ಡಿ ಅವರನ್ನು ಆಂತರಿಕ ಭದ್ರತೆಯ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಸಂಚಾರಿ ಪೊಲೀಸ್ ಇದರ ವಿಶೇಷ ಆಯುಕ್ತರಾಗಿದ್ದ ಡಾ ಎಂ ಎ ಸಲೀಂ ಅವರನ್ನು ಸಿಐಡಿ ತನಿಖಾ ಸಂಸ್ಥೆ ಆರ್ಥಿಕ ಅಪರಾಧ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಿಐಡಿ ಎಡಿಜಿಪಿ ಆಗಿದ್ದ ಕೆ ವಿ ಶರತ್ ಚಂದ್ರ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ADVERTISEMENT