ADVERTISEMENT
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತದ ಪ್ರಮಾಣ ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ಈಗ ಸಂಚಾರಿ ಪೊಲೀಸರು ದಂಡ ಪ್ರಯೋಗಕ್ಕಿಳಿದಿದ್ದಾರೆ.
ಎಕ್ಸ್ಪ್ರೆಸ್ ವೇನಲ್ಲಿ ಅತೀ ವೇಗದಲ್ಲಿ ಚಲಿಸುವ ವಾಹನಗಳ ಮೇಲೆ ರಾಮನಗರ ಪೊಲೀಸರು ದಂಡ ಹಾಕುತ್ತಿದ್ದಾರೆ.
ಎಕ್ಸ್ಪ್ರೆಸ್ ವೇನಲ್ಲಿ ವೇಗದ ಮಿತಿ ಪ್ರತಿ ಗಂಟೆಗೆ 90 ಕಿಲೋ ಮೀಟರ್ ವೇಗದಲ್ಲಿ ಮಾತ್ರ ಅವಕಾಶವಿದೆ. 90 ಕಿಲೋ ಮೀಟರ್ ವೇಗದಲ್ಲಿ ಸಂಚರಿಸಿದರೆ ದಂಡ ಕಟ್ಟಬೇಕಾಗುತ್ತದೆ.
ಸ್ಪೀಡ್ ರ್ಯಾಡರ್ ಗನ್ಸ್ ತಂತ್ರಜ್ಞಾನ ಬಳಸಿ ಅತೀ ವೇಗದಲ್ಲಿ ಬರುವ ವಾಹನಗಳನ್ನು ತಡೆದು ಪೊಲೀಸರು ದಂಡ ಮತ್ತು ಪ್ರಕರಣ ದಾಖಲಿಸುತ್ತಿದ್ದಾರೆ.
ಈ ಬಗ್ಗೆ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಅತೀ ವೇಗಕ್ಕೆ 1 ಸಾವಿರ ರೂಪಾಯಿಯಿಂದ 2 ಸಾವಿರ ರೂಪಾಯಿವರೆಗೆ ದಂಡ ಪಾವತಿಸಬೇಕಾಗುತ್ತದೆ.
ADVERTISEMENT