No Result
View All Result
ಜೈಲಿನಿಂದ ಬಿಡುಗಡೆ ಆದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಅವರನ್ನು ಬೆಂಗಳೂರು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.
6 ವರ್ಷಗಳ ಹಿಂದಿನ ಪ್ರಕರಣದಲ್ಲಿ ನಾರಾಯಣಗೌಡ ಅವರನ್ನು ವಶಕ್ಕೆ ಪಡೆದಿರುವ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಮಾರ್ಥಾಸ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿದ್ದಾರೆ. ಬಳಿಕ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
2017ರಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಾರಾಯಣಗೌಡ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿತ್ತು.
ಕೋವಿಡ್ ಸಂದರ್ಭದಲ್ಲೂ ನಾರಾಯಣಗೌಡ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಾರಾಯಣಗೌಡ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಪ್ರಕರಣದಲ್ಲಿ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿತ್ತು. ಈ ಕೇಸ್ನಲ್ಲೂ ನಾರಾಯಣಗೌಡ ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಕಳೆದ ತಿಂಗಳ ಡಿಸೆಂಬರ್ 27ರಂದು ನಾರಾಯಣಗೌಡ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರಿನ ಹಲವು ಕಡೆಗಳಲ್ಲಿ ಖಾಸಗಿ ಸಂಸ್ಥೆಗಳಿಗತೆ ನುಗ್ಗಿ ಗಲಾಟೆ ಮಾಡಿದ್ದಲ್ಲದೇ ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ದೊಂಬಿ, ಗಲಾಟೆ, ಸಾರ್ವಜನಿಕ ಆಸ್ತಿಗೆ ಹಾನಿ ಆರೋಪದಡಿ ಬಂಧಿಸಲಾಗಿತ್ತು.
No Result
View All Result
error: Content is protected !!