ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಕೆಲ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಈ ಬಗ್ಗೆ ಕಳೆದ ರಾತ್ರಿ ಎಕ್ಸ್ ಪೋಸ್ಟ್ನಲ್ಲಿ ಬರೆದಿರುವ ಅವರು, ಕಾಂಗ್ರೆಸ್ ಸದಸ್ಯರು ಹಿಂಸಾಚಾರ, ಪ್ರಚೋದನೆ, ಸಾರ್ವಜನಿಕ ಆಸ್ತಿ ಹಾನಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಯ ಉದ್ದೇಶಪೂರ್ವಕ ಕೃತ್ಯಗಳನ್ನು ಉಲ್ಲೇಖಿಸಿ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕನ್ಹಯ್ಯಾ ಕುಮಾರ್ ಮತ್ತು ಇತರ ವ್ಯಕ್ತಿಗಳ ವಿರುದ್ಧ ಸೆಕ್ಷನ್ 120(ಬಿ)143/147/188/283/353/332/333/427 IPC R/W ಸೆಕ್ಷನ್ 3 PDPP ಕಾಯಿದೆಯ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
With reference to wanton acts of violence, provocation , damage to public property and assault on police personnel today by Cong members , a FIR has been registered against Rahul Gandhi, KC Venugopal , Kanhaiya Kumar and other individuals under section…
— Himanta Biswa Sarma (@himantabiswa) January 23, 2024
ಜನಸಮೂಹವನ್ನು ಪ್ರಚೋದಿಸುವ ಆರೋಪದ ಮೇಲೆ ರಾಹುಲ್ ಗಾಂಧಿ ಹಾಗೂ ಪಕ್ಷದ ಕೆಲ ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಬಿಹಾರದ ಸಿಎಂ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಇದರ ಬೆನ್ನಲ್ಲೇ ಪ್ರಕರಣ ದಾಖಲಾಗಿದೆ.
ರಾಹುಲ್ ಗಾಂಧಿ ಅವರ ಜೋಡೋ ಯಾತ್ರೆ ಮೇಘಾಲಯದಿಂದ ಅಸ್ಸಾಂಗೆ ಪ್ರವೇಶಿಸಿದಾಗ ಭಾರೀ ಬಿಕ್ಕಟ್ಟು ಪ್ರಾರಂಭವಾಗಿತ್ತು. ಯಾತ್ರೆಯನ್ನು ಗುವಾಹಟಿ ಮಾರ್ಗದಲ್ಲಿ ಪ್ರವೇಶಿಸುವುದನ್ನು ನಿರಾಕರಿಸಲಾಗಿತ್ತು. ಯಾತ್ರೆಯನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುವಂತೆ ಸೂಚನೆ ನೀಡಲಾಗಿತ್ತು.