ಪ್ರಧಾನ ಮಂತ್ರಿಗಳಾಗಿದ್ದ ಪಿ ವಿ ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಆಗಿದ್ದ ಎಂ ಎಸ್ ಸ್ವಾಮಿನಾಥನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಭಾರತ ರತ್ನ ಘೋಷಿಸಿದೆ.
ಈ ಮೂಲಕ ಈ ವರ್ಷದಲ್ಲೇ ಒಟ್ಟು ಐವರಿಗೆ ಭಾರತ ರತ್ನ ಘೋಷಿಸಲಾಗಿದೆ. ಇವರಲ್ಲಿ ಮೂವರಿಗೆ ಮರಣೋತ್ತರವಾಗಿ ಭಾರತ ರತ್ನ ಘೋಷಿಸಲಾಗಿದೆ.
ಬಿಹಾರದ ಜನನಾಯಕ ಕರ್ಪೂರಿ ಠಾಕೂರ್, ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಕೆಲ ದಿನಗಳ ಹಿಂದೆಯಷ್ಟೇ ಭಾರತ ರತ್ನ ಘೋಷಿಸಲಾಗಿತ್ತು.
1991ರಿಂದ 1996ರವರೆಗೆ ಪಿ ವಿ ನರಸಿಂಹರಾವ್ ಅವರು ಭಾರತದ ಪ್ರಧಾನಿಯಾಗಿದ್ದರು. ಇವರ ಸಂಪುಟದಲ್ಲಿ ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿ ಭಾರತದಲ್ಲಿ ಜಾಗತೀಕರಣ ಮತ್ತು ಖಾಸಗೀಕರಣವನ್ನು ಪರಿಚಯಿಸಲಾಯಿತು.
ಚೌಧರಿ ಚರಣ್ ಸಿಂಗ್ ಅವರು 1979ರಿಂದ 1980ರ ಅವಧಿಯಲ್ಲಿ ಪ್ರಧಾನಮಂತ್ರಿಯಾಗಿದ್ದರು.