ವೇಗವಾಗಿ ಬಂದ ಕಾರೊಂದು ಪಾಣೆಮಂಗಳೂರು ಹೆದ್ದಾರಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ಕುಶಾಂತ್ ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಪಾರಾಗಿದ್ದು, ಕಾರು ಜಖಂಗೊಂಡಿದೆ.
ಜನರೇಟರ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿರುವ ಕುಶಾಂತ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಕುಶಾಂತ್ ಉಡುಪಿಯಿಂದ ಹೊರಟಿದ್ದು ಮಧ್ಯರಾತ್ರಿ 2:30ರ ಸುಮಾರಿಗೆ ಪಾಣೆಮಂಗಳೂರು ತಲುಪುತ್ತಿದ್ದಾಗ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ.
ಇನ್ನು ಕ್ರೇನ್ ಸಹಾಯದಿಂದ ಕಾರನ್ನು ಹಳ್ಳದಿಂದ ಹೊರ ತೆಗೆಯಲಾಯಿತು.