ಕರ್ನಾಟಕದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರ ಹೆಸರನ್ನು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಅಂತಿಮಗೊಳಿಸಿದ್ದಾರೆ.
ನಾಳೆ ಮಧ್ಯಾಹ್ನ 3.30ಕ್ಕೆ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಉಪ ಮುಖ್ಯಮಂತ್ರಿಯಾಗಿ ಡಿಕೆಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.