ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಅತ್ಯಂತ ದೊಡ್ಡ ಘೋಷಣೆಯನ್ನು ಮಾಡಿದೆ.
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ ನೀಡುವ ವಾಗ್ದಾನ ಮಾಡಿದೆ. ರಾಷ್ಟ್ರ ಮಟ್ಟದಲ್ಲಿ ಮಹಾಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸುವ ಮಹತ್ವ ನಿರ್ಧಾರ ಘೋಷಿಸಿದೆ.
ಇದಲ್ಲದೇ ಕೇಂದ್ರ ಸರ್ಕಾರದ ನೌಕರಿಯಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಹುದ್ದೆ ಮೀಸಲಿಡುವುದಾಗಿ ಕಾಂಗ್ರೆಸ್ ಘೋಷಿಸಿದೆ.
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರ ವೇತನದಲ್ಲಿ ಕೇಂದ್ರ ಸರ್ಕಾರದ ಪಾಲು ಹೆಚ್ಚಳ ಮಾಡುವುದಾಗಿಯೂ ಕಾಂಗ್ರೆಸ್ ಹೇಳಿದೆ.
ಪ್ರತಿಯೊಂದು ಗ್ರಾಮ ಪಂಚಾಯತ್ಗಳಲ್ಲಿ ಅಧಿಕಾರ ಮೈತ್ರಿ ಹೆಸರಲ್ಲಿ ಒಬ್ಬರನ್ನು ನೇಮಿಸುವ ಮೂಲಕ ಮಹಿಳೆಯರ ಹಕ್ಕಿನ ಬಗ್ಗೆ ತಿಳಿಸುವ ಪ್ರಯತ್ನ ಮಾಡಲಾಗುತ್ತದೆ.
ಪ್ರತಿಯೊಂದು ಜಿಲ್ಲೆಯಲ್ಲೂ ಸಾವಿತ್ರ ಭಾಯ್ ಫುಲೆ ಹೆಸರಲ್ಲಿ ಒಂದೊಂದು ಮಹಿಳಾ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತದೆ.