ಕಾಂಗ್ರೆಸ್ಗೆ ಮತ್ತೊಂದು ಶಾಕ್ ಎದುರಾಗಿದ್ದು, ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ (Ghulam Nabi Azad) ಅಜಾದ್ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಅವರು, ಪಕ್ಷದ ಎಲ್ಲಾ ಜವಾಬ್ದಾರಿ ಸೇರಿದಂತೆ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಜಮ್ಮು-ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಗುಲಾಂ ನಬಿ ರಾಜೀನಾಮೆ – ಒಂದೇ ಗಂಟೆಯಲ್ಲಿ ಸೆಡ್ಡು
ಗುಲಾಂ ಅಬಿ ಅಜಾದ್ (Ghulam Nabi Azad) ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ನಾಯಕರಾಗಿದ್ದಾರೆ. 2005 ರಿಂದ 2008 ರ ವರೆಗೆ ಆ ರಾಜ್ಯದ ಮುಖ್ಯಮಂತ್ರಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ. ಹಾಗೆಯೇ, ಮನ್ಮೋಹನ್ ಸಿಂಗ್ ಸಂಪುಟದಲ್ಲಿ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
Congress leader Ghulam Nabi Azad resigns from all positions including primary membership of Congress Party pic.twitter.com/hOFp1FQkCj
— ANI (@ANI) August 26, 2022
ಇದೇ ತಿಂಗಳ 16 ರ ರಂದು ಗುಲಾಂ ಅಭಿ ಅಜಾದ್ ಅವರು ಜುಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಗಂಟೆಯಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅಲ್ಲದೇ, ಜಮ್ಮು ಕಾಶ್ಮೀರ ಕಾಂಗ್ರೆಸ್ ವ್ಯವಹಾರಗಳ ಸಮಿತಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.
https://youtu.be/61mHWgkDoDE